ಹೂವಿನಹಡಗಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವೆ ಶಾಸಕ ಕೃಷ್ಣನಾಯ್ಕ ಭರವಸೆ.
ತ್ಯಾಗಭೂಮಿ ಡಿಜಿಟೆಲ್ ಡೆಸ್ಕ್
ಹೂವಿನ ಹಡಗಲಿ : ದೇಶದ ಸ್ವತಂತ್ರಕ್ಕಾಗಿ ಅನೇಕ ಮಹನೀಯರು ತಮ್ಮ ತ್ಯಾಗ, ಬಲಿದಾನಗಳನ್ನು ನೀಡಿದ್ದರ ಪ್ರತಿಫಲ ನಾವು ನೆಮ್ಮದಿಯಿಂದ ಜೀವನ ಸಾಗಿಸುತ್ತಿದ್ದೇವೆ ಎಂದು ಹೂವಿನಹಡಗಲಿ ಶಾಸಕ ಕೃಷ್ಣನಾಯ್ಕ ಹೇಳಿದರು.
ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕಾಡಳಿತ ಏರ್ಪಡಿಸಿದ್ದ 78 ನೇ ಸ್ವಾತಂತ್ರ್ಯೋತ್ಸವದಲ್ಲಿ ವೇದಿಕೆಯಲ್ಲಿ ಮಾತನಾಡಿದರು, ದೇಶದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ರೈತರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಂತೆ ಹೂವಿನ ಹಡಗಲಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಈ ವೇಳೆ ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ತಹಸೀಲ್ದಾರ್ ಸಂತೋಷ ಕುಮಾರ, ಸಿಪಿಐ ದೀಪಕ್.ಆರ್.ಬೋಸ್ ರೆಡ್ಡಿ, ಪುರಸಭೆ ಸದಸ್ಯರಾದ ಗೌಸ್ ಮಹಿದ್ಧೀನ್, ಸಂತೋಷ್ ಜೈನ್ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಬಳಿಕ ತಾಲೂಕು ಕ್ರೀಡಾಂಗಣದಲ್ಲಿ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.