Monday, July 14, 2025
spot_img
HomeDesignಚುನಾವಣೆಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಮುಂದೂಡಿಕೆ : ಆಯ್ಕೆ ಪ್ರಕ್ರಿಯೆಗೆ ನ್ಯಾಯಾಲಯದ ತಡೆ.

ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಮುಂದೂಡಿಕೆ : ಆಯ್ಕೆ ಪ್ರಕ್ರಿಯೆಗೆ ನ್ಯಾಯಾಲಯದ ತಡೆ.

ತ್ಯಾಗಭೂಮಿ ಡಿಜಿಟಲ್ ಡೆಸ್ಕ್

ಹರಪನಹಳ್ಳಿ :

ಬಹುಮತ ಪಡೆದು ಈ ಬಾರಿ ಒಗ್ಗಟ್ಟು ಪ್ರದರ್ಶಿಸಲು ಸಿದ್ದತೆ ಮಾಡಿಕೊಂಡಿದ್ದ ಕಾಂಗ್ರೆಸ್ ಪಕ್ಷಕ್ಕೆ ನ್ಯಾಯಾಲಯದ ತಡೆಯಾಜ್ಞೆಯಿಂದ ನಿರಾಸೆ ಉಂಟಾಯಿತು.

ಚುನಾವಣೆ ಹಿನ್ನೆಲೆಯಲ್ಲಿ ಬೆಳಿಗ್ಗೆ ಪುರಸಭೆ ಆವರಣ ಪ್ರವೇಶಿಸುವ ರಸ್ತೆಗಳಿಗೆ ಬ್ಯಾರಿಕೆಡ್ ಹಾಕಿ ಬಂದ್ ಮಾಡಿ ಪೋಲಿಸ್ ಬಂದೋಬಸ್ತ್ ಹಾಕಲಾಗಿತ್ತು. ಬಿಜೆಪಿಯಿಂದ ಕೌಟಿ ಸುಮಾ ಮತ್ತು ಕಾಂಗ್ರೆಸ್ ಪಕ್ಷದಿಂದ ಫಾತಿಮಾಬಿ ಅವರು ನಾಮಪತ್ರ ಸಲ್ಲಿಸಿ ತೆರಳಿದ್ದರು.

ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಮತ್ತು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್ ನೇತೃತ್ವದಲ್ಲಿ ಸದಸ್ಯರು ಮತದಾನ ಪ್ರಕ್ರಿಯೆ ಸಮಯಕ್ಕೆ ಸಭಾಂಗಣ ಪ್ರವೇಶಿಸಿದ ಕೆಲವೊತ್ತಿನಲ್ಲಿ ಹೈಕೋರ್ಟ್ ತಡೆಯಾಜ್ಞೆ ವಿಷಯ ತಿಳಿದು ಹಿಂತಿರುಗಿದ್ದು ಸಂಭ್ರಮಾಚರಣೆಗೆ ಸಿದ್ದ ಮಾಡಿಕೊಂಡಿದ್ದ ಅಭಿಮಾನಿಗಳಿಗೆ ನಿರಾಸೆ ಮೂಡಿಸಿತು.

ಹರಪನಹಳ್ಳಿ ಪುರಸಭೆ ಅಧ್ಯಕ್ಷೆ ಮತ್ತು ಉಪಾಧ್ಯಕ್ಷರ ಆಯ್ಕೆ ಹಿನ್ನೆಲೆಯಲ್ಲಿ ಆವರಣದಲ್ಲಿ ಜಮಾಯಿಸಿರುವ ಜನರು

ಸಭೆ ಆರಂಭಕ್ಕೂ ಮುನ್ನವೇ ಅಧ್ಯಕ್ಷೆ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ಸದಸ್ಯೆ ಕೌಟಿ ಸುಮಾ, ಸದಸ್ಯರಾದ ಹರಾಳು ಅಶೋಕ, ಕಿರಣ್ ಶ್ಯಾನುಬೋಗ, ವಿನಯ್ ಕುಮಾರ, ಎಂ.ಕೆ.ಜಾವಿದ್, ರೊಕ್ಕಪ್ಪ ಅವರು ಪುರಸಭೆ ಚುನಾವಣೆಗೆ ಧಾರವಾಡ ಪೀಠ ತಾತ್ಕಾಲಿಕ ತಡೆ ನೀಡಿದ್ದು ಚುನಾವಣೆ ಮುಂದೂಡುವಂತೆ ಲಿಖಿತ ದೂರು ಸಲ್ಲಿಸಿದ್ದರು. ಅವರ ಮನವಿ ಪರಿಶೀಲಿಸಿದ ಬಳಿಕ ನ್ಯಾಯಾಲಯವು ಆ 20ರಂದು ನೀಡಿರುವ ಆದೇಶ ಗೌರವಿಸಿ ಸಭೆ ಮುಂದೂಡಲಾಗಿದೆ’ ಎಂದು ತಹಶೀಲ್ದಾರ ಬಿ.ವಿ.ಗಿರೀಶ್ ಬಾಬು ಸ್ಪಷ್ಟಪಡಿಸಿದರು.

ತಡೆಯಾಜ್ಞೆ ವಾಗ್ವಾದ
ಕಾಂಗ್ರೆಸ್ ಪಕ್ಷದಿಂದ 14 ಜನ ಸದಸ್ಯರು ಗೆದ್ದಿದ್ದಾರೆ. ಫಾತೀಮಾಬಿ ಅವರನ್ನು ಅಭ್ಯರ್ಥಿಯಾಗಿ ನಿರ್ಧರಿಸಲಾಗಿದೆ. ಆದರೂ ನಮ್ಮ ಪಕ್ಷದವರೇ ಹೈಕೋರ್ಟ್ಗೆ ಹೋಗಿದ್ದರಿಂದ ಕಾಂಗ್ರೆಸ್ ಗೆಲುವಿಗೆ ತೊಡಕು ಉಂಟಾಗಿದೆ. ಸಾಮಾನ್ಯ ಮಹಿಳೆ ಮೀಸಲಾತಿಯಡಿ ನಮ್ಮ ಸಮಾಜಕ್ಕೆ ಏಕೆ ನ್ಯಾಯ ಕಲ್ಪಿಸಲಿಲ್ಲ ಎಂದು ಶಾಸಕರ ಕಚೇರಿ ಆವರಣದಲ್ಲಿ ಗದ್ದಲ ನಡೆಸಿದ ಮುಸ್ಲಿಂ ಮುಖಂಡರನ್ನು ಶಾಸಕಿ ಲತಾ ಮಲ್ಲಿಕಾರ್ಜುನ್ ಸಮಧಾನಪಡಿಸಿ ಕಳಿಸಿದರು. ಇದರಿಂದ ಕಾಂಗ್ರೆಸ್ ಪಕ್ಷದಲ್ಲಿ ಒಗ್ಗಟ್ಟಿನ ಕೊರತೆ ಕಂಡುಬಂದಿತು.

“ನಾವು ಚುನಾವಣೆ ಎದುರಿಸಲು ಒಗ್ಗಟ್ಟಾಗಿದ್ದೆವು. ಹರಪನಹಳ್ಳಿ ಸೇರಿ ಐದು ಪುರಸಭೆ ಚುನಾವಣೆಗೆ ನ್ಯಾಯಾಲಯದಲ್ಲಿರುವ ತಡೆಯಾಜ್ಞೆ ತೆರವು ಬಳಿಕ ಇದೇ ಆಯ್ಕೆ ಪ್ರಕ್ರಿಯೆ ಮುಂದುವರೆಯುತ್ತದೆ.”

– ಎಂ,ಪಿ.ಲತಾ ಮಲ್ಲಿಕಾರ್ಜುನ್. ಹರಪನಹಳ್ಳಿ ಶಾಸಕರು.


ನಮ್ಮ ಪುರಸಭೆಯ ಸದಸ್ಯರೊಬ್ಬರು ಮೀಸಲಾತಿ ಬದಲಾವಣೆಗೆ ಕೋರಿ ಧಾರವಾಡ ಪೀಠದಲ್ಲಿ ಸಲ್ಲಿಸಿದ್ದ ಅರ್ಜಿಗೆ ನ್ಯಾಯಾಲಯ ತಡೆ ನೀಡಿದೆ. ಇದರ ಆಧಾರದ ಮೇಲೆ ಸಭೆ ಚುನಾವಣೆ ಮುಂದುವರೆಸಬಾರದು ಎಂದು ಸಲ್ಲಿಸಿದ್ದ ಮನವಿಗೆ ಚುನಾವಣೆ ಅಧಿಕಾರಿಗಳು ಸ್ಪಂದಿಸಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿರುವುದಕ್ಕೆ ಬಿಜೆಪಿ ಸದಸ್ಯರು ಸ್ವಾಗತಿಸಿದ್ದೇವೆ’

– ಎಚ್.ಎಂ.ಅಶೋಕ, ನಿಕಟಪೂರ್ವ ಪುರಸಭೆ ಅಧ್ಯಕ್ಷ.

ವಾರ್ತಾ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸರ್ಕಾರದ ಯೋಜನೆಗಳನ್ನು ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳ...

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್ ಜುಲೈ 1ರಿಂದ ಜಾರಿ.

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್: ಜುಲೈ 1ರಿಂದ ಜಾರಿ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ನವದೆಹಲಿ. ನ್ಯಾಯಯುತ ಮತ್ತು ಪಾರದರ್ಶಕ ಖಚಿತಪಡಿಸಿಕೊಳ್ಳಲು ಮತ್ತು ನಿಜವಾದ ಪ್ರಯಾಣಿಕರ ಹಿತಾಸಕ್ತಿಗಳನ್ನು ಕಾಪಾಡುವ ಉದ್ದೇಶದಿಂದ,...

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ.

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್. ವಿಜಯನಗರ. ಕನ್ನಡ ಸಂಸ್ಕೃತಿ ಇಲಾಖೆಯಿಂದ ಆಯೋಜಿಸುವ ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ...

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಟಿಗಾಗಿ ‘ಜಿಲ್ಲಾ ಸಾಥಿ ಸಮಿತಿ’ ರಚನೆ

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಠಿಗಾಗಿ 'ಜಿಲ್ಲಾ ಸಾಥಿ ಸಮಿತಿ' ರಚನೆ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಜಿಲ್ಲಾ ಮಟ್ಟದಲ್ಲಿ ನಿರ್ಗತಿಕ ಮಕ್ಕಳನ್ನು ಗುರುತಿಸಿ ಅಧಾರ್ ದಾಖಲೆಯಲ್ಲಿ ಮಕ್ಕಳ ಹೆಸರನ್ನು ಸೇರಿಸಿ ಅವರಿಗೆ ಶಿಕ್ಷಣ, ವೈದ್ಯಕೀಯ...

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಹೊಸಪೇಟೆ ತಾಲೂಕಿನ ಕಮಲಾಪುರ ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ 2025-26 ನೇ ಸಾಲಿನ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಅವಾಸ್ (ನಗರ)...
RELATED ARTICLES
- Advertisment -
Google search engine
- Advertisment -
Google search engine
- Advertisment -
Google search engine

Most Popular

error: Content is protected !!