ತ್ಯಾಗಭೂಮಿ ಡಿಜಿಟಲ್ ನ್ಯೂಸ್
ಹರಪನಹಳ್ಳಿ :
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ತಪ್ಪು ಮಾಡಿಲ್ಲ ಅವರ ಪರವಾಗಿ ನಮ್ಮ ಹೋರಾಟ ನಿರಂತರವಾಗಿದೆ ಎಂದು ಶಾಮನೂರು ಶಿವಶಂಕರಪ್ಪ ಅವರ ಸೊಸೆ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಪತ್ನಿ ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಎಂಪಿ ಚುನಾವಣೆಯಲ್ಲಿ ಗೆಲುವು ಪಡೆದ ಬಳಿಕ ಇದೇ ಮೊದಲ ಬಾರಿಗೆ ಹರಪನಹಳ್ಳಿ ತಾಲೂಕಿಗೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ದಾವಣಗೆರೆ ಲೋಕಸಭೆ ಕ್ಷೇತ್ರವ್ಯಾಪ್ತಿಯಲ್ಲಿನ ಹಿಂದುಳಿದ ಕ್ಷೇತ್ರಗಳಾದ ಜಗಳೂರು ಮತ್ತು ಹರಪನಹಳ್ಳಿ ಅಭಿವೃದ್ದಿಗೆ ಶ್ರಮಿಸುತ್ತೇನೆ. ಸೆಪ್ಟಂಬರ್ ತಿಂಗಳಲ್ಲಿ ಲೋಕಸಭೆ ಕ್ಷೇತ್ರದ ಎಲ್ಲ ಕ್ಷೇತ್ರಗಳಲ್ಲಿ ಸಂಸದರ ಜನತಾ ದರ್ಶನ ಹಮ್ಮಿಕೊಳ್ಳುತ್ತೇನೆ ಎಂದರು ಮಾಹಿತಿ ನೀಡಿದರು. ಸಂಸದರ ಅನುದಾನದಡಿ ಎಲ್ಲ ಕ್ಷೇತ್ರಗಳಿಗೆ ಸಮನಾಗಿ ಹಂಚಿಕೆ ಮಾಡುವುದಾಗಿ ಅವರು ಭರವಸೆ ನೀಡಿದರು.