ಕ್ರೀಡಾ ವಸತಿ ಶಾಲೆಗೆ ಭೂಮಿ ನಿಗಧಿ, ಕ್ರೀಡಾ ಇಲಾಖೆಗೆ ಹಸ್ತಾಂತರ.
ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ಹಗರಿಬೊಮ್ಮನಹಳ್ಳಿ.
ಕ್ಷೇತ್ರದಲ್ಲಿನ ಕ್ರೀಡಾಪಟುಗಳು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಲು ಅಗತ್ಯ ಪ್ರೋತ್ಸಾಹಕ್ಕೆ ನಾನು ಸದಾ ಸಿದ್ಧ. ಶೀಘ್ರವೇ ಕ್ರೀಡಾ ವಸತಿ ಶಾಲಾ ಆರಂಭಕ್ಕೆ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಶಾಸಕ ಕೆ.ನೇಮಿರಾಜನಾಯ್ಕ ಹೇಳಿದರು.
ಪಟ್ಟಣದ ಗಂಗಾವತಿ ಭೀಮಪ್ಪನವರ ತಾಲೂಕು ಕ್ರೀಡಾಂಗಣದಲ್ಲಿ ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆ ಮತ್ತು ಶ್ರೀ ವಿದ್ಯಾನಿಕೇತನ ಪಿಯು ಕಾಲೇಜು ಸಹಯೋಗದಲ್ಲಿ ಏರ್ಪಡಿಸಿದ್ದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ಈಗಾಗಲೇ ಪಟ್ಟಣದಲ್ಲಿ ಕ್ರೀಡಾ ವಸತಿ ಶಾಲಾ ಆರಂಭಕ್ಕೆ ನಿವೇಶನ ಮೀಸಲಿರಿಸಿ, ಕ್ರೀಡಾ ಇಲಾಖೆಗೆ ಹಸ್ತಾಂತರಿಸಲಾಗಿದೆ. ಸರ್ಕಾರಕ್ಕೆ ಸಹ ಕ್ರೀಡಾ ವಸತಿ ಶಾಲಾ ಆರಂಭಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರ ಆರಂಭಕ್ಕೆ ಒತ್ತಾಯಿಸಲಾಗುವುದು. ರಾಜ್ಯಾದ್ಯಾಂತ ಪಿಯು ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರಿಲ್ಲದೇ ಪಿಯು ವಿದ್ಯಾರ್ಥಿಗಳು ಕ್ರೀಡೆಗಳಿಂದ ವಂಚಿತರಾಗುವ ಸಾಧ್ಯತೆ ಹೆಚ್ಚಿದೆ. ಪಿಯು ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರನ್ನು ತುಂಬಿಕೊಳ್ಳುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದರು.

ಬಳಿಕ ಕ್ರೀಡಾಜ್ಯೋತಿ ಬೆಳಗುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಎಂ.ಪಿ.ಎಂ.ಮಂಜುನಾಥ ಪ್ರತಿಜ್ಞಾ ಬೋಧಿಸಿದರು. ಶ್ರೀವಿದ್ಯಾನಿಕೇತನ ಪಿಯು ಕಾಲೇಜಿನ ಅಧ್ಯಕ್ಷ ಪಿ.ಶರತ್ ಚಂದ್ರ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯರ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಬಿ.ಎಂ.ನಾಗಲಿಂಗಸ್ವಾಮಿ ಪ್ರಾಸ್ತಾವಿಕ ಮಾತನಾಡಿದರು, ಪುರಸಭೆ ಸದಸ್ಯರಾದ ದೀಪಕ್ ಕಠಾರೆ, ಬಣಕಾರ ಸುರೇಶ್, ಪ್ರಮುಖರಾದ ವೈ.ಮಲ್ಲಿಕಾರ್ಜುನ, ನಾಣ್ಯಾಪುರ ಕೃಷ್ಣಮೂರ್ತಿ, ಬಡಿಗೇರ ಬಸವರಾಜ, ಬಿ.ಜಿ.ಬಡಿಗೇರ್, ಕೊಟ್ರೇಶಪ್ಪ, ಗಂಭೀ.ಸರ್ಕಾರಿ ಪಿಯು ಕಾಲೇಜು ಪ್ರಾಚಾರ್ಯ ಡಾ.ಎಂ.ಕೆ.ದುರುಗಪ್ಪ, ಶ್ರೀವಿದ್ಯಾನಿಕೇತನ ಕಾಲೇಜು ಪ್ರಾಚಾರ್ಯ ಎಂ.ಆರ್.ಶೇಖರ್, ನಂದಿ ಪಿಯು ಕಾಲೇಜು ಪ್ರಾಚಾರ್ಯ ಜಿ.ಎಂ.ನಾಗಭೂಷಣ್, ರೇಣುಕಾ ಪಿಯು ಕಾಲೇಜು ಪ್ರಾಚಾರ್ಯ ಶ್ರೀಕಾಂತ್, ರಾಷ್ಟ್ರೋತ್ಥಾನ ಪಿಯು ಕಾಲೇಜು ಪ್ರಾಚಾರ್ಯ ಮಂಜುನಾಥ ನಂದಿ, ಪಾಪುಸ್ವಾಮಿ ಪಿಯು ಕಾಲೇಜಿನ ಪ್ರಾಚಾರ್ಯ ಎಚ್.ಕೆ.ಬಿ.ಎಂ.ಚನ್ನಬಸಯ್ಯ, ತಂಬ್ರಹಳ್ಳಿ ಎಬಿಟಿಎಂ ಕಾಲೇಜಿನ ಪ್ರಾಚಾರ್ಯ ಎಚ್.ಎಂ.ಬಸವರಾಜಯ್ಯ, ಮೋರಿಗೇರಿ ಸರ್ಕಾರಿ ಪಿಯು ಕಾಲೇಜು ಪ್ರಾಚಾರ್ಯ ಕೆ.ಬಿ.ಪ್ರಕಾಶ್ ಇತರರಿದ್ದರು. ಉಪನ್ಯಾಸಕ ಕಡಲಬಾಳು ವಿ.ಎಂ.ಗವಿಸಿದ್ದೇಶ್ ನಿರ್ವಹಿಸಿದರು.