ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ಬೆಂಗಳೂರು.
ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ(84) ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ ಹಲವು ದಿನಗಳಿಂದ ತೀವ್ರ ಆನಾರೋಗ್ಯದಿಂದ ಬಳಲುತ್ತಿದ್ದರು. ಇಂದು ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ.
ಈ ಹಿಂದೆ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ಶೇ.40 % ಕಮಿಷನ್ ಆರೋಪ ಮಾಡಿ ಗುತ್ತಿಗೆದಾರರ ಪರ ಹೋರಾಟ ಮಾಡಿ ಹೆಚ್ಚು ಸುದ್ದಿಯಾಗಿದ್ದರು. ಅಷ್ಟೇ ಅಲ್ಲದೇ ಸಿದ್ದರಾಮಯ್ಯ ಸರ್ಕಾರದಲ್ಲಿಯೂ ಸಾಕಷ್ಟು ಭ್ರಷ್ಟಚಾರ ನಡೆಯುತ್ತಿದೆ ಎಂದು ಹೇಳಿಕೆ ನೀಡಿದ್ದರು. ಬಿಜೆಪಿ ಸರ್ಕಾರದಲ್ಲಿದ್ದ ಭ್ರಷ್ಟಚಾರ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಚಾರ ನಡೆಯುತ್ತಲೇ ಇದೆ. ಆದರೇ ಈಗ ಯಾವುದೇ ಪ್ರಮುಖ ಕೆಲಸಗಳಿಲ್ಲದ್ದರಿಂದ ಅದು ಕಣ್ಣಿಗೆ ಕಾಣುತ್ತಿಲ್ಲ ಎಂದು ಹೇಳಿದ್ದರು.