ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಹೇಳಿಕೆ.
ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ಹಗರಿಬೊಮ್ಮನಹಳ್ಳಿ.
ಕ್ರೀಡೆಯಲ್ಲಿ ಗ್ರಾಮೀಣ ಭಾಗದ ಕ್ರೀಡಾಳುಗಳ ಸಾಧನೆಯೇ ಹೆಚ್ಚು ಸೂಕ್ತ ತರಬೇತಿ ನೀಡಿದರೇ ರಾಜ್ಯ, ರಾಷ್ಟ್ರಮಟ್ಟದಲ್ಲಿ ಅವಕಾಶ ಸಿಗಲಿದೆ ಎಂದು ಶಾಸಕ ಕೆ.ನೇಮಿರಾಜನಾಯ್ಕ ಹೇಳಿದರು.
ಪಟ್ಟಣದ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಮೈದಾನದಲ್ಲಿ ಏರ್ಪಡಿಸಿದ್ದ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಕ್ರೀಡಾಜ್ಯೋತಿ ಬೆಳಗಿಸಿ ಚಾಲನೆ ನೀಡಿ ಮಾತನಾಡಿದರು. ಕ್ರೀಡಾಸಕ್ತರಿಗೆ ಕ್ರೀಡಾ ತರಬೇತಿ ಕೊರತೆ ಎದ್ದು ಕಾಣುತ್ತಿದೆ. ಹಾಗಾಗೀ ಕ್ಷೇತ್ರದಲ್ಲಿ ಕ್ರೀಡಾ ವಸತಿ ಶಾಲೆ ಆರಂಭಕ್ಕೆ ಚಿಂತನೆ ನಡೆಸಲಾಗಿದೆ. ವಿಕಲಚೇತನರ ಥ್ರೋಬಾಲ್ ಕ್ರಿಡೆಗೆ ತಾಲೂಕಿನ ವ್ಯಾಸಾಪುರ ತಾಂಡಾದ ಯುವತಿ ಮಂಜುಳಾ ಆಯ್ಕೆಯಾಗಿರುವುದು ಶ್ಲಾಘನೀಯ. ವಿದ್ಯಾಭ್ಯಾಸದ ಜತೆಗೆ ಕ್ರಿಡೆಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು. ಕ್ರೀಡೆಗಳಿಂದ ಸಧೃಡ ಆರೋಗ್ಯ ಮತ್ತು ಬುದ್ದಿಶಕ್ತಿ ವೃದ್ಧಿಯಾಗಲಿದೆ ಎಂದರು.
ಬಿಇಒ ಮೈಲೇಶ್ ಬೇವೂರು ಮಾತನಾಡಿ, ವಿದ್ಯಾರ್ಥಿಗಳಿಗೆ ಪ್ರಾಥಮಿಕ, ಪ್ರೌಢಶಾಲಾ ಹಂತದಲ್ಲಿಯೇ ಕ್ರೀಡಾ ಮನೋಭಾವ ಹೆಚ್ಚಿಸಬೇಕಿದೆ. ಈ ಬಾರಿ ದೇಶದ ಕ್ರೀಡಾಪಟುಗಳು ಒಲಂಪಿಕ್ಸ್ ನಲ್ಲಿ ಹೆಚ್ಚಿನ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವುದು ಯುವಕ್ರೀಡಾಳುಗಳಿಗೆ ಪ್ರೋತ್ಸಾಹ ನೀಡಿದಂತಾಗಿದೆ. ಕ್ರೀಡೆಗಳಲ್ಲಿ ಸೋಲು ಗೆಲುವಿಗಿಂತ ಭಾಗವಹಿಸುವಿಕೆ ಪ್ರಮುಖವಾಗಿದೆ ಎಂದರು.
ನಂದಿಪುರದ ಡಾ.ಮಹೇಶ್ವರ ಸ್ವಾಮೀಜಿ, ಹಾಲಸಿದ್ದೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಈ ವೇಳೆ ತಾಪಂ ಇಒ ಜಿ.ಪರಮೇಶ್ವರ, ಬಿಆರ್ಸಿ ಅಧಿಕಾರಿ ಎಂ.ಎಸ್.ಪ್ರಭಾಕರ್, ಜಿಲ್ಲಾ ದೈಹಿಕ ಪರಿವೀಕ್ಷಕ ಕೊಟ್ರೇಶ, ತಾಲೂಕು ದೈಹಿಕ ಪರಿವೀಕ್ಷಕ ಎಚ್.ಸೋಮಪ್ಪ, ಬಿಸಿಯೂಟದ ಅಧಿಕಾರಿ ರಾಜಕುಮಾರ್ ನಾಯ್ಕ, ವೇದಿಕೆಯಲ್ಲಿದ್ದರು. ಮುಖಂಡರಾದ ವೈ.ಮಲ್ಲಿಕಾರ್ಜುನ, ಕಿನ್ನಾಳ್ ಸುಭಾಷ್, ಚಿತವಾಡ್ಗಿ ಪ್ರಕಾಶ್, ಸಿದ್ದರಾಜು, ರಾಜಲಿಂಗಪ್ಪ, ಸರ್ಕಾರಿ ನೌಕರರ ಸಂಘ ಅಧ್ಯಕ್ಷ ಎಂ.ಪಿ.ಎಂ.ಮಂಜುನಾಥ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಅಧ್ಯಕ್ಷ ಹ್ಯಾಟಿ ಲೋಕಪ್ಪ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರವಿಚಂದ್ರನಾಯ್ಕ, ಶಿಕ್ಷಣ ಸಂಯೋಜಕ ಎನ್.ವಿ.ಶಿವಲಿಂಗಸ್ವಾಮಿ ಇದ್ದರು. ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿಯನ್ನು ದೈಹಿಕ ಶಿಕ್ಷಕ ಉಜ್ಜನಗೌಡ್ರು ಬೋಧಿಸಿದರು. ಬಿಆರ್ ಪಿ ರುದ್ರಪ್ಪ, ಶಿಕ್ಷಣ ಸಂಯೋಜಕ ಎಂ.ಎಸ್.ಗುರುಬಸವರಾಜ ನಿರ್ವಹಿಸಿದರು.