ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ಹಗರಿಬೊಮ್ಮನಹಳ್ಳಿ.
ತಾಲೂಕಿನ ಬ್ಯಾಲಾಳು ಗ್ರಾಮದ ಸಂಶೋಧನಾ ವಿದ್ಯಾರ್ಥಿ ಬಿ.ನಾಗರಾಜ್ ರಿಗೆ ಆಂಧ್ರ ಪ್ರದೇಶದ ಕುಪ್ಪಂನ ದ್ರಾವಿಡ ವಿಶ್ವವಿದ್ಯಾಲಯದ ಕನ್ನಡ ಭಾಷೆ ಮತ್ತು ಅನುವಾದ ಅಧ್ಯಯನ ವಿಭಾಗದಿಂದ ಅವರು ಮಂಡಿಸಿದ ‘ಕೊ.ಚೆನ್ನಬಸಪ್ಪನವರ ಕಾದಂಬರಿಗಳು ಒಂದು ಅಧ್ಯಯನ’ ಎಂಬ ಪ್ರೌಢ ಪ್ರಬಂಧಕ್ಕೆ ದ್ರಾವಿಡ ವಿಶ್ವವಿದ್ಯಾಲಯವು ಪಿಎಚ್ ಡಿ ಪದವಿ ಪ್ರದಾನ ಮಾಡಿದೆ. ಕನ್ನಡ ಅಧ್ಯಯನ ವಿಭಾಗದ ಪ್ರಾಧ್ಯಾಪಕರಾದ ಜಯಲಲಿತರವರ ಮಾರ್ಗದರ್ಶನದಲ್ಲಿ ಸಂಶೋಧನಾ ಪ್ರಬಂಧವನ್ನು ಸಿದ್ದಪಡಿಸಿದ್ದರು. ಪ್ರಸ್ತುತ ಇವರು ಹರಪನಹಳ್ಳಿಯ ಅಲ್ಪಸಂಖ್ಯಾತರ ಮುರಾರ್ಜಿ ದೇಸಾಯಿ ವಸತಿ ವಸತಿ ಶಾಲೆಯಲ್ಲಿ ಕನ್ನಡ ಭಾಷಾ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.