ಬ್ರೇಕಿಂಗ್ ನ್ಯೂಸ್ : ಶಾಲಾ ಬಸ್, ಬೈಕ್ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು
ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ಹಗರಿಬೊಮ್ಮನಹಳ್ಳಿ.
ತಾಲೂಕಿನ ಮುತ್ಕೂರು – ವಲ್ಲಭಾಪುರ ಮಾರ್ಗದ ರಸ್ತೆಯಲ್ಲಿ ಶಾಲಾ ಬಸ್ ಹಾಗೂ ಬೈಕ್ ನಡುವೆ ಅಪಘಾತಗೊಂಡು ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಸಂಜೆ ನಡೆದಿದೆ.
ಬೈಕನಲ್ಲಿ ಇಬ್ಬರು ಸವಾರರು ಇದ್ದರು, ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದು, ತಂಬ್ರಹಳ್ಳಿ ದುರುಗಪ್ಪ (26) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಹಿಂಬದಿ ಸವಾರ ಗಂಭೀರ ಗಾಯಗೊಂಡ ಹಿನ್ನಲೆಯಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.
ಇಬ್ಬರು ಬೈಕ್ ಸವಾರರು ತಂಬ್ರಹಳ್ಳಿಗೆ ಹೊರಟಿದ್ದರು ಎನ್ನಲಾಗಿದೆ. ಪಟ್ಟಣದ ಶ್ರೀರೇಣುಕಾ ಶಾಲೆಯ ಬಸ್ ವಿದ್ಯಾರ್ಥಿಗಳನ್ನು ಬಿಡಲು ಮುತ್ಕೂರು ಗ್ರಾಮದಿಂದ ವಲ್ಲಭಾಪುರ ಗ್ರಾಮಕ್ಕೆ ತೆರಳುವ ವೇಳೆ ಅಪಘಾತಗೊಂಡಿದೆ. ಕೂಡಲೇ ಸ್ಥಳೀಯರು ಅಂಬ್ಯುಲೆನ್ಸ್ ಗೆ ಕರೆ ಮಾಡಿ ಅಪಘಾತಗೊಂಡವರ ರಕ್ಷಣೆಗೆ ಮುಂದಾಗಿದ್ದಾರೆ.