ವಿಶ್ವ ಪ್ರವಾಸೋದ್ಯಮ ದಿನಾಚರಣೆ ಇಂದು
ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ಹೊಸಪೇಟೆ.
ವಿಜಯನಗರ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಸಹಯೋಗದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಹಂಪಿಯ ಶ್ರೀ ವಿರೂಪಾಕ್ಷ ದೇಗುಲದ ಮುಂಭಾಗದಲ್ಲಿ ಇಂದು ಹಮ್ಮಿಕೊಳ್ಳಲಾಗಿದೆ.
ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಪ್ರಭುಲಿಂಗ ತಳಕೇರಿ ಪತ್ರಿಕೆಯೊಂದಿಗೆ ಮಾತನಾಡಿ, ವಿಶ್ವ ಪ್ರವಾಸೋದ್ಯಮ ದಿನಾಚರಣೆ ನಿಮಿತ್ತವಾಗಿ ಈಗಾಗಲೇ ವಿಶ್ವಪ್ರಸಿದ್ಧ ಐತಿಹಾಸಿಕ ಹಂಪಿಯಲ್ಲಿ ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಸಂದೇಶದೊಂದಿಗೆ ಆಚರಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಶ್ರೀ ಪಂಪಾ ವಿರೂಪಾಕ್ಷೇಶ್ವರ ದೇವಸ್ಥಾನ ಆವರಣದಲ್ಲಿ ರಂಗೋಲಿ ಸ್ಪರ್ಧೆ ಸೇರಿದಂತೆ ಸ್ವಚ್ಛತಾ ಹೀ ಸೇವಾ ಅಭಿಯಾನದ ಮೂಲಕ ಎಲ್ಲಾ ಪ್ರವಾಸಿ ಮಾರ್ಗದರ್ಶಿಗಳ ಸಹಯೋಗದಲ್ಲಿ ಹಂಪಿ ಸ್ವಚ್ಛತಾ ಕಾರ್ಯ ಮತ್ತು ಎದುರು ಬಸವಣ್ಣದಿಂದ ಮಾತಾಂಗ ಪರ್ವತದವರೆಗೆ ಶಾಂತಿಗಾಗಿ ಪಾರಂಪರಿಕ ನಡಿಗೆ ಕಾರ್ಯಕ್ರಮ ನಡೆಸಲಾಗಿದೆ.
ಇಂದು ಸಂಜೆ ಹಂಪಿಯಲ್ಲಿ ಕಲಾತಂಡಗಳ ಮೆರವಣಿಗೆ ಮೂಲಕ ವೇದಿಕೆ ಕಾರ್ಯಕ್ರಮ ಆರಂಭಿಸಲಾಗುವುದು.
ಕಾರ್ಯಕ್ರಮಕ್ಕೆ ಹಂಪಿ ಗ್ರಾಮ ಪಂಚಾಯತಿ, ಕಮಲಾಪುರ ಹೊಟೇಲ್ ಮಯೂರ ಭುವನೇಶ್ವರಿ (ಕೆಎಸ್ಟಿಡಿಸಿ) ಸೇರಿದಂತೆ ಜಿಲ್ಲಾ ಪ್ರವಾಸಿ ಮಾರ್ಗದರ್ಶಿಗಳು ಸಹಕಾರ ನೀಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಲು ಕೋರಿದರು.