ಟ್ರ್ಯಾಕ್ಟರ್ ಮೇಲಿಂದ ಆಯತಪ್ಪಿ ಬಿದ್ದು ಮಗು ಸಾವು
ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ಹರಪನಹಳ್ಳಿ.
ತಾಲೂಕಿನ ಜಿಟ್ಟಿನಕಟ್ಟೆ ಗ್ರಾಮದಲ್ಲಿ ಮನೆ ಮುಂದೆ ನಿಂತಿದ್ದ ಟ್ರ್ಯಾಕ್ಟರ್ ಮೇಲೆ ಆಟ ಆಡುತ್ತಿದ್ದ ಮಗು ಆಯತಪ್ಪಿ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.
ವಕೀಲ ಸಿದ್ದನ ಗೌಡ ಹಾಗೂ ಸವಿತಾ ಗೌಡ ಅವರ ಪುತ್ರಿ ದಿಶಾಗೌಡ (6) ಮೃತಪಟ್ಟಿರುವ ಬಾಲಕಿ.
ದಾವಣಗೆರೆಯಲ್ಲಿ ನೆಲೆಸಿದ್ದ ಅವರು ಅಮವಾಸ್ಯೆ ಹಿನ್ನಲೆಯಲ್ಲಿ ಸ್ವಗ್ರಾಮಕ್ಕೆ ಆಗಮಿಸಿದ್ದರು. ಅಮವಾಸ್ಯೆ ಪೂಜೆ ಸಲ್ಲಿಸಿ ನಿಲ್ಲಿಸಿದ್ದ ಟ್ರ್ಯಾಕ್ಟರ್ ಮೇಲೆ ಆಡುತ್ತಿದ್ದ ದಿಶಾಗೌಡ ಆಕಸ್ಮಿಕ ಕಾಲು ಜಾರಿ ಬಿದ್ದಿದೆ.
ತಕ್ಷಣ ಹರಪನಹಳ್ಳಿ ಆಸ್ಪತ್ರೆಗೆ ಕರೆದೊಯ್ಯುದಿದ್ದಾರೆ. ವೈದ್ಯರು ದಾವಣಗೆರೆ ಆಸ್ಪತ್ರೆಗೆ ಶಿಫಾರಸು ಮಾಡಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆಗೆ ತೆರಳುವ ಮಾರ್ಗಮಧ್ಯೆದಲ್ಲಿ ಮಗು ಮೃತ ಪಟ್ಟಿದೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಅರಸೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.