ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ಹರಪನಹಳ್ಳಿ.
ತಾಲೂಕಿನ ನಂದಿಬೇವೂರು ಗ್ರಾಪಂ ಪಿಡಿಒ, ಹೂವಿನಹಡಗಲಿ ತಾಲೂಕಿನ ಸೋಗಿ ಗ್ರಾಮದ ಎಸ್.ವೀರೇಶ್(48) ಅವರು ಅನಾರೋಗ್ಯದಿಂದ ಶುಕ್ರವಾರ ಬೆಳ್ಳಂಬೆಳಗ್ಗೆ ನಿಧನರಾದರು. ಮೃತರು ಒಬ್ಬ ಪುತ್ರ, ಪತ್ನಿ, ತಾಯಿ, ಇಬ್ಬರು ಸಹೋದರರು ಹಾಗೂ ಓರ್ವ ಸಹೋದರಿಯನ್ನು ಅಗಲಿದ್ದಾರೆ. ಹರಪನಹಳ್ಳಿ ಪಟ್ಟಣದಲ್ಲಿ ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಅಂತ್ಯಕ್ರಿಯೆ ಜರುಗಲಿದೆ.
ಸಂತಾಪ: ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಉಪ ಕಾರ್ಯದರ್ಶಿಗಳು, ತಾಪಂನ ಕಾರ್ಯನಿರ್ವಾಹಕ ಅಧಿಕಾರಿ, ಸಹಾಯಕ ನಿರ್ದೇಶಕರು, ಸೇರಿದಂತೆ ನರೇಗಾ ಹಾಗೂ ಆರ್ ಡಿ ಪಿ ಆರ್ ಇಲಾಖೆಯ ಇತರ ಸಿಬ್ಬಂದಿ ವರ್ಗವು ಮೃತರಿಗೆ ಸಂತಾಪ ಸೂಚಿಸಿದ್ದಾರೆ.