ಬೈಕ್ ಸವಾರ ಸಾವು
ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ಹೊಸಪೇಟೆ (ವಿಜಯನಗರ) :
ನಗರದ ಟಿಬಿ ಡ್ಯಾಂನ ಕೇಂದ್ರೀಯ ವಿದ್ಯಾಲಯದ ಬಳಿ ಬೈಕ್ ನಿಂದ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನಡೆದಿದೆ.
ಕೊಪ್ಪಳದ ಹುಲಿಗಿಯ ನಿವಾಸಿ ಪಿ.ವಿ.ವಾಸುದೇವನಾಯ್ಡು (48) ಬೈಕ್ ಸ್ಕಿಡ್ ಆಗಿ ಬಿದ್ದಿದ್ದಾರೆ. ತೀವ್ರ ಗಾಯಗೊಂಡಿದ್ದ ಇವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.